HomeLatest NewsBIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

BIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಣ್ಭವಿಸಿ 11 ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಕೊಟ್ಟಿಗೆ ಪಾಳ್ಯ ನಿವಾಸಿ ಗಿರೀಶ್ ಕುಮಾರ್ ಎಂಬುವವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸುದೀರ್ಘ ಪತ್ರ ಬರೆದು, ದೂರು ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಐಪಿಎಲ್- ಆರ್ ಸಿಬಿ ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ. ಸರಿಯಾಗಿ ವ್ಯವಸ್ಥೆ ಮಾಡದೇ ನಿರ್ಲಕ್ಷ್ಯ ವಹಿಸಿದ ಕಾರಣ ಅಮಾಯಕರ ಸಾವು-ನೋವು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular