ಬಾರಾಬಂಕಿ : ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಶನಿವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟಗೊಂಡ ಆಘಾತಕಾರಿ ಘಟನೆ ವರದಿಯಾಗಿದೆ.
ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದೊಳಗೆ ಈ ಘಟನೆ ನಡೆದಿದೆ. ವರದಿಯ ಪ್ರಕಾರ. ಕಾರು ಅವಿನಾಶ್ ಪಾಲ್ ಅವರ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಅವರ ಜೇಬಿನಿಂದ ಹೊಗೆ ಹೊರಬರಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ.
ಕೆಲವೇ ಸೆಕೆಂಡುಗಳಲ್ಲಿ ಸ್ಫೋಟ ಸಂಭವಿಸಿ ವಾರ್ಡ್ ಒಳಗೆ ಬೆಂಕಿ ಕಾಣಿಸಿಕೊಂಡಿತು. ಆಸ್ಪತ್ರೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದರು. ಕೊತ್ವಾಲಿ ಪ್ರದೇಶದ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

