HomeLatest NewsBREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!

BREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸಿಐಡಿ ಅಧಿಕಾರಿಗಳ ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ದುರಂತ ನಡೆದ ಸ್ಥಳ ಪರಿಶೀಲನೆ ನಡೆಸಿತು. ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆ.ಎಸ್.ಸಿಎ ಸಭೆ ನಡೆಯುತ್ತಿತ್ತು.

ಕೆ.ಎಸ್.ಸಿ.ಎ ಅಧ್ಯಕ್ಷ ರಘುರಾಮ್ ಭಟ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದ ವೇಳೆಯೇ ಸಿಐಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆ ವೇಳೆ ಜೂನ್ ೪ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಹಾಗೂ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular