HomeLatest NewsBIG NEWS: ಕಾಲ್ತುಳಿತ ಪ್ರಕರಣಕ್ಕೆ ಸ್ಪೋಟಕ ತಿರುವು: ಜೂ. 4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು

BIG NEWS: ಕಾಲ್ತುಳಿತ ಪ್ರಕರಣಕ್ಕೆ ಸ್ಪೋಟಕ ತಿರುವು: ಜೂ. 4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 4ರಂದೇ ಸರ್ಕಾರಕ್ಕೆ ಪೊಲೀಸರು ಪತ್ರ ಬರೆದು ಅಪಾಯದ ಎಚ್ಚರಿಕೆ ನೀಡಿರುವುದು ಗೊತ್ತಾಗಿದೆ.

ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಜೂನ್ 4ರಂದೇ ಪತ್ರ ಬರೆದಿದ್ದು ಪೊಲೀಸರು ಬೇಡವೆಂದರೂ ಸರ್ಕಾರ ಕಾರ್ಯಕ್ರಮ ಮಾಡಿ 11 ಜನರ ಸಾವಿಗೆ ಕಾರಣವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೀಗೆಂದು ಆರೋಪ ಮಾಡಿದ್ದಾರೆ

ಡಿಸಿಪಿ ಕರಿಬಸವನಗೌಡ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಆರ್‌ಸಿಬಿ ಅಭಿಮಾನಿಗಳ ಸಂಖ್ಯೆ ದೇಶಾದ್ಯಂತ ಇದೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಗೆ ತೊಂದರೆಯಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸೌಧದ ಭವ್ಯ ಮೆಟ್ಟುಲುಗಳ ಮುಂಭಾಗ ಕಾರ್ಯಕ್ರಮವನ್ನು ಆತುರದಲ್ಲಿ ಆಯೋಜಿಸುತ್ತಿರುವುದರಿಂದ ಲಕ್ಷಾಂತರ ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಬಂದೋಬಸ್ತ್ ಕರ್ತವ್ಯ ನಿರ್ವಹಣೆಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಡಿಸಿಪಿ ಪತ್ರ ಬರೆದಿದ್ದಾರೆ.

ವಿಧಾನಸೌಧ ಕಟ್ಟಡದ ಸುರಕ್ಷತೆ ದೃಷ್ಟಿಯಿಂದ ಕಟ್ಟದ ಆವರಣ ಮತ್ತು ಮುಂಭಾಗದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಅನುಮತಿ ಕೋರಿದ್ದು, ಅಳವಡಿಸಿಲ್ಲ. ಸಮಾರಂಭದಲ್ಲಿ ಕ್ರಿಕೆಟ್ ಪಟುಗಳನ್ನು ಸನ್ಮಾನಿಸುವ ವೇದಿಕೆಯ ಸದೃಢವಾಗಿರುವ ಬಗ್ಗೆ ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ಭದ್ರತಾ ಸಿಬ್ಬಂದಿ ಪರಿಶೀಲಿಸಿ ಪ್ರಮಾಣ ಪತ್ರ ಪಡೆದುಕೊಳ್ಳುವ ಸಂಬಂಧ ಕನಿಷ್ಠ ಎರಡು ಗಂಟೆ ಮುಂಚಿತವಾಗಿ ವೇದಿಕೆಯನ್ನು ಪರಿವಿಕ್ಷಣೆಗೆ ಬಿಟ್ಟು ಕೊಡಬೇಕೆಂದು ಪತ್ರ ಬರೆಯಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular