HomeLatest NewsBREAKING: ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಪ್ರಾರಂಭ: ಸಿಎಂ ರಾಜೀನಾಮೆಗೆ ಒತ್ತಾಯ

BREAKING: ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಪ್ರಾರಂಭ: ಸಿಎಂ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ 11 ಜನರು ಸಾವು ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸೇರಿರುವ ಬಿಜೆಪಿ ನಾಯಕರು, ಸಂಸದರು, ಶಾಸಕರು, ಎಂ ಎಲ್ ಸಿಗಳು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸರ್ಕಾರದ ಬೇಜವಾಬ್ದಾರಿಗೆ 11 ಜನರು ಅಮಾಯಕರು ಬಲಿಯಾಗಿದ್ದಾರೆ. ತಮ್ಮ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಿ ಜನರನ್ನು ಸಾಯಿಸಿದ್ದಾರೆ. ಪೊಲೀಸರು ಬೇಡ ಎಂದರೂ ಸಮಾರಂಭವನ್ನು ಆಯೋಜನೆ ಮಾಡಿ ದುರಂತಕ್ಕೆ ಕಾರಣರಾಗಿದ್ದಾರೆ. ನೈತ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular