HomeLive NewsBIG NEWS: ಕಾಂಗ್ರೆಸ್ಸಿಗರು ಸೀಳುನಾಯಿಗಳು: ಛಲವಾದಿ ನಾರಾಯಣಸ್ವಾಮಿ ಆಕ್ರೋಶ!

BIG NEWS: ಕಾಂಗ್ರೆಸ್ಸಿಗರು ಸೀಳುನಾಯಿಗಳು: ಛಲವಾದಿ ನಾರಾಯಣಸ್ವಾಮಿ ಆಕ್ರೋಶ!

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ 11 ಜನರು ಸಾವನ್ನಪ್ಪಿರುವ ಘಟನೆ ಖಂಡಿಸಿ, ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ ತೀವ್ರಗೊಂಡಿದೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ನವರು ಸೀಳುನಾಯಿಗಳು ಎಂದು ಕಿಡಿಕಾರಿದ್ದಾರೆ.

ಸೀಳುನಾಯಿಗಳಂತೆ 11 ಜನ ಅಮಾಯಕರನ್ನು ಬಲಿ ಪಡೆದಿದ್ದೀರಾ. ಕಿಂಚಿತ್ತೂ ಮನುಷತ್ವ, ಮಾನವೀಯತೆ ಎಂಬುದಾದರೂ ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿಗರು ರಣಹದ್ದುಗಳು. ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ನಮ್ಮ ವಿರುದ್ಧ ಆರೋಪಿಸಿದಿರಿ. ಕಾಂಗ್ರೆಸ್ ನವರಾದ ನೀವು ಸೀಳುನಾಯಿಗಳು. ಸೀಳುನಾಯಿಗಳಂತೆ 11 ಜನರು ಸಾಯಿಸಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular