ಚಿಕ್ಕಮಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಸರ್ಕಾರದ ಬೇಜವಾಬ್ದಾರಿಯೇ ಘಟನೆಗೆ ಕಾರಣ ಎಂದು ಆರೋಪಿಸುತ್ತಿದೆ. ದುರಂತದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಗುತ್ತಿದೆ. ಈ ನಡುವೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾ ಸರ್ಕಾರ ಫೇಲ್ಯೂರ್ ಆಗಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ಮೊದಲೇ ಗೊಂದಲಗಳು ಇದ್ದವು. ಸಾಕಷ್ಟು ಗೊಂದಲಗಳ ನಡುವೆಯೇ ಕಾರ್ಯಕ್ರಮ ಆಯೋಜಿಸಲಾಗಿದೆ. ಕಮಿಷನರ್ ಮಟ್ಟದಲ್ಲಿ ಬೇರೆಯೇ ಅಗಿದೆ. ಡಿಸಿಪಿ ಮಟ್ಟದಲ್ಲಿ ಬೇರೆಯೇ ಆಗಿದೆ ಎಂದು ಹೇಳಿದರು.
ಇನ್ಸ್ ಪೆಕ್ಟರ್ ಅವರು ಒಂದು ಒಪತ್ರ ಬರೆದಿದ್ದಾರೆ. ಪೊಲೀಸರು ಕೂಡ ಮತ್ತೊಂದು ಪತ್ರ ಬರೆದಿದ್ದಾರೆ. ಎಲ್ಲಾ ನಾನು ಹೇಳಿತ ದಕ್ಷಣ ಆಗಲ್ಲ, ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ತನಿಖೆ ನಡೆಯುತ್ತಿದೆ. ತನಿಖೆ ವರದಿ ಬರಲಿ ಎಂದು ಹೇಳಿದರು.