HomeLatest Newsತೆಲಂಗಾಣ ಸಚಿವ ಸಂಪುಟ ವಿಸ್ತರಣೆ: ಸಚಿವರಾಗಿ ಮೂವರು ಕಾಂಗ್ರೆಸ್ ಶಾಸಕರ ಪ್ರಮಾಣವಚನ

ತೆಲಂಗಾಣ ಸಚಿವ ಸಂಪುಟ ವಿಸ್ತರಣೆ: ಸಚಿವರಾಗಿ ಮೂವರು ಕಾಂಗ್ರೆಸ್ ಶಾಸಕರ ಪ್ರಮಾಣವಚನ

ಹೈದರಾಬಾದ್: ತೆಲಂಗಾಣದ ಮೂವರು ಕಾಂಗ್ರೆಸ್ ಶಾಸಕರು ಭಾನುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಜಿ ವಿವೇಕ್ ವೆಂಕಟ ಸ್ವಾಮಿ, ಅಡ್ಲೂರಿ ಲಕ್ಷ್ಮಣ್ ಕುಮಾರ್ ಮತ್ತು ವಕಿಟಿ ಶ್ರೀಹರಿ ಅವರಿಗೆ ತೆಲಂಗಾಣ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಇತರ ಕ್ಯಾಬಿನೆಟ್ ಸಚಿವರು ಸಹ ಸಮಾರಂಭದಲ್ಲಿ ಹಾಜರಿದ್ದರು. ಈ ಮೂವರು ಸಚಿವರ ಸೇರ್ಪಡೆಯೊಂದಿಗೆ, ಈಗ ಸಂಪುಟ ವಿಸ್ತರಣೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೋರ್ನಕಲ್ ಶಾಸಕ ಜೆ ರಾಮಚಂದರ್ ನಾಯಕ್ ಅವರನ್ನು ತೆಲಂಗಾಣ ವಿಧಾನಸಭೆಯ ಉಪಸಭಾಪತಿಯಾಗಿ ನೇಮಿಸಲಾಗಿದೆ. ಹೊಸದಾಗಿ ಸೇರ್ಪಡೆಗೊಂಡ ಸಚಿವರಿಗೆ ಖಾತೆಗಳ ಹಂಚಿಕೆಯನ್ನು ಇನ್ನೂ ಘೋಷಿಸಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular