HomeLatest NewsSHOCKING: ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ

SHOCKING: ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಸಮೀಪ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಹನುಮಪ್ಪ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಮೂಲದ ಅಣ್ಣ-ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಪ್ಯಾಸೆಂಜರ್ ರೈಲಿನಲ್ಲಿ ಆಗಮಿಸಿದ ಇವರು ಬಜಕರೆ ರೈಲು ನಿಲ್ದಾಣದಲ್ಲಿ ಇಳಿದಿದ್ದಾರೆ. ರೈಲು ಹೋದ ನಂತರ ಸುಮಾರು 500 ಮೀಟರ್ ದೂರದವರೆಗೂ ಅಣ್ಣನನ್ನು ಕರೆದುಕೊಂಡು ಹೋದ ತಮ್ಮ ನಿಂಗಪ್ಪ ಏಕಾಏಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಹನಮುಪ್ಪ ಚರಂಡಿಗೆ ಹಾರಿದ್ದು, ಚರಂಡಿ ನೀರಿಗೆ ಬಿದ್ದ ಕಾರಣ ಬೆಂಕಿ ನಂದಿದೆ. ಅವರ ಕಿರುಚಾಟ ಕೇಳಿದ ಸ್ಥಳೀಯರು ಓಡಿ ಬಂದು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಡಬ ಠಾಣೆ ಪೊಲೀಸರು ನಿಂಗಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular