HomeLatest NewsBIG NEWS: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಣೆ

BIG NEWS: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಣೆ

ಬೆಂಗಳೂರು: ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಡ್ಡಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು(Emperical Data) ಸಂಗ್ರಹಿಸಲು, ದಿನಾಂಕ: 05-05-2025 ರಿಂದ ಮನೆ-ಮನೆ ಭೇಟಿ ಮೂಲಕ ರಾಜ್ಯಾದ್ಯಂತ ಸಮೀಕ್ಷೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಪ್ರಸ್ತುತ ದಿನಾಂಕ: 02.06.2025 ರಿಂದ ದಿನಾಂಕ: 08.06.2025 ರವರೆಗೆ ಕೇವಲ ವಿಶೇಷ ಶಿಬಿರಗಳು ಮತ್ತು ಆನ್-ಲೈನ್ ಲಿಂಕ್ ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳುವುದರ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನಾಂಕ:06-06-2025 ರವರೆವಿಗೆ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 90.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿದ್ದು, ಸುಮಾರು ಶೇ. 10 ರಷ್ಟು ಪ್ರಗತಿ ಸಾಧಿಸಲು ಬಾಕಿಯಿರುತ್ತದೆ. ರಾಜ್ಯಾದ್ಯಂತ ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ, ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲು ಮತ್ತು ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಶೇ. 100 ರಷ್ಟು ಪ್ರಗತಿಯನ್ನು ಸಾಧಿಸಲು ಕ್ರಮವಹಿಸಬೇಕೆಂದು ಈಗಾಗಲೇ ತಿಳಿಸಲಾಗಿರುತ್ತದೆ ಹಾಗೂ Whitelist ಮಾಡಲಾಗಿರುವ ಶಿಕ್ಷಕರು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತಮ್ಮ ಬಿಡುವಿನ ವೇಳೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳಲು ಅಗತ್ಯ ಸೂಚನೆಗಳನ್ನು ಜಿಲ್ಲಾ ಹಂತದಲ್ಲಿ ನೀಡತಕ್ಕದ್ದು.

ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ, ದಿನಾಂಕ: 09.06.2025 ರಿಂದ ದಿನಾಂಕ: 22.06.2025 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್”(Karnataka one) “ಬೆಂಗಳೂರು ಒನ್”(Bengaluru one) ಮತ್ತು “ಗ್ರಾಮ ಒನ್”(Grama one) ಕೇಂದ್ರಗಳು.

ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗುವುದು.

ಬಿ.ಬಿ.ಎಂ.ಪಿ ವ್ಯಾಪ್ತಿಯ 198 “ಬಿ.ಬಿ.ಎಂ.ಪಿ ವಾರ್ಡ್ ಕಚೇರಿ”(BBMP ward offices) ಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು.

Online 3 https://schedulecastesurvey.karnataka.gov.i n/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ದಿನಾಂಕ: 22.06.2025 ರವರೆಗೆ ವಿಸ್ತರಿಸಲಾಗಿದೆ.

ಮೇಲ್ಕಂಡ ಸ್ಥಳಗಳಲ್ಲಿ/ವಿಧಾನದ ಮೂಲಕ ಸಮೀಕ್ಷೆಯನ್ನು ದಿನಾಂಕ: 22.06.2025 ರವರೆಗೆ ವಿಸ್ತರಿಸಿರುವ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಶೇ. 100 ರಷ್ಟು ಪ್ರಗತಿಯನ್ನು ಸಾಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular