HomeLatest Newsರಾಜ್ಯದಲ್ಲಿ ಇಂದಿನಿಂದ ಭಾರೀ ಗಾಳಿ ಸಹಿತ ಮಳೆ: 28 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'

ರಾಜ್ಯದಲ್ಲಿ ಇಂದಿನಿಂದ ಭಾರೀ ಗಾಳಿ ಸಹಿತ ಮಳೆ: 28 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಭಾರೀ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ ಹೊರತಾಗಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವು ಕಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆ ಆಗುವ ಸಂಭವ ಇದೆ. ಬುಧವಾರದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆಯ ಹಲವು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದ್ದು, ಗುರುವಾರದಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular