HomeLatest Newsಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ: ಸೌಲಭ್ಯ, ಸಾಧನೆಯ 'ಪೋಸ್ಟರ್...

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ: ಸೌಲಭ್ಯ, ಸಾಧನೆಯ ‘ಪೋಸ್ಟರ್ ಪ್ರಚಾರ’

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಖಾಸಗಿ ಶಾಲೆಗಳ ಮಾದರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯ ಹಾಗೂ ಎಸ್ಎಸ್ಎಲ್ಸಿಯಲ್ಲಿ 625 ಕ್ಕೆ 625 ಅಂಕ ಪಡೆದ ಮಕ್ಕಳ ಸಾಧನೆಯ ಮಾಹಿತಿ ಒಳಗೊಂಡ ಪೋಸ್ಟರ್ ಗಳನ್ನು ಅಳವಡಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.

 ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪೋಸ್ಟರ್ ಗಳನ್ನು ಅಳವಡಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಮೇ 29 ರಿಂದ ಶಾಲಾ ದಾಖಲಾತಿ ಆರಂಭವಾಗಿದೆ. ಜೂನ್ ಅಂತ್ಯದವರೆಗೂ ಶಾಲಾ ದಾಖಲಾತಿಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಶಾಲೆಗಳಲ್ಲಿ ಉಚಿತ ದಾಖಲಾತಿ, ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್ ಉಚಿತವಾಗಿ ನೀಡಲಾಗುವುದು. ಪ್ರತಿದಿನ ಮಧ್ಯಾಹ್ನ ಬಿಸಿಯೂಟ, ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು, ಕ್ಷೀರ ಭಾಗ್ಯದ ಜೊತೆಗೆ ರಾಗಿ ಮಾಲ್ಟ್ ವಿತರಣೆ ಸೇರಿ ಸರ್ಕಾರಿ ಶಾಲೆಗಳಲ್ಲಿನ ಇತರೆ ಸೌಲಭ್ಯ, ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಇರುವ ಕಲಿಕಾ ಚಿಲುಮೆ, ಗಣಿತ ಗಣಕ, ಓದು ಕರ್ನಾಟಕ, ಕಲಿಕಾ ದೀಪ, ಜ್ಞಾನ ಸೇತು, ವಿದ್ಯಾ ವಿಜೇತ ಮೊದಲಾದ ಕಾರ್ಯಕ್ರಮಗಳ ಮಾಹಿತಿ ಒಳಗೊಂಡಂತೆ ಪೋಸ್ಟರ್ ಸಿದ್ಧಪಡಿಸಲಾಗಿದೆ.

2024 -25 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ಶಿರಸಿಯ ಸರ್ಕಾರಿ ಉರ್ದು ಪ್ರೌಢಶಾಲೆಯ ಶಗುಪ್ತ ಅಂಜುಂ, ಬೆಳಗಾವಿ ಜಿಲ್ಲೆ ದೇವಲಾಪುರದ ಸರ್ಕಾರಿ ಪ್ರೌಢಶಾಲೆಯ ರೂಪಾ ಚೆನ್ನೇಗೌಡ ಪಾಟೀಲ್ ಅವರ ಸಾಧನೆಯನ್ನು ಪೋಸ್ಟರ್ ನಲ್ಲಿ ಪ್ರದರ್ಶಿಸಲು ನಿರ್ದೇಶನ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular