HomeLatest Newsಚಾಮರಾಜನಗರದಲ್ಲಿ ಘೋರ ದುರಂತ: ಕೃಷಿಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರು ಪಾಲು

ಚಾಮರಾಜನಗರದಲ್ಲಿ ಘೋರ ದುರಂತ: ಕೃಷಿಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರು ಪಾಲು

ಚಾಮರಾಜನಗರ: ಕೃಷಿ ವಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲದ ಘಟನೆ ಚಾಮರಾಜನಗರ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ.

ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮದ ಚಾಮರಾಜು(25), ಆಕಾಶ್(22) ಮೃತಪಟ್ಟ ಯುವಕರು ಎಂದು ಹೇಳಲಾಗಿದೆ. ಪಿಜಿ ಪಾಳ್ಯದ ನಿವಾಸಿ ಚಾಮರಾಜು ಬೆಂಗಳೂರಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಆಕಾಶ್ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

ಭಾನುವಾರ ಸಂಬಂಧಿಕರ ಗೃಹಪ್ರವೇಶ ಇದ್ದ ಹಿನ್ನೆಲೆಯಲ್ಲಿ ಪಿಜಿ ಪಾಳ್ಯ ಗ್ರಾಮಕ್ಕೆ ಆಗಮಿಸಿದ್ದರು. ಗೃಹಪ್ರವೇಶ ಮುಗಿದ ನಂತರ ದೊಡ್ಡಪ್ಪ ಕೆಂಪರಾಜು ಅವರ ಜಮೀನಿನಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾರೆ. ಆದರೆ, ಮೇಲೆ ಬರಲು ಸಾಧ್ಯವಾಗದೆ ಕೂಗಿಕೊಂಡಿದ್ದು, ಇದನ್ನು ಗಮನಿಸಿದ ದೊಡ್ಡಪ್ಪ ಇಬ್ಬರನ್ನು ರಕ್ಷಿಸಲು ಪ್ರಯತ್ನ ನಡೆಸಿ ದಡಕ್ಕೆ ಎಳೆದು ತಂದಿದ್ದಾರೆ. ಆದರೆ, ಈ ವೇಳೆಗಾಗಲೇ ಇಬ್ಬರು ಮೃತಪಟ್ಟಿದ್ದರು ಎಂದು ಹೇಳಲಾಗಿದೆ. ಹನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular