HomeLatest NewsBREAKING NEWS: ‘ಖಾತೆ ಬದಲಾವಣೆ’ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಗರಂ

BREAKING NEWS: ‘ಖಾತೆ ಬದಲಾವಣೆ’ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಗರಂ

ಬೆಂಗಳೂರು: ಬೆಂಗಳೂರು ಕಾಲ್ತುಳಿತ ಘಟನೆ ನಂತರ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಗರಂ ಆಗಿದ್ದಾರೆ.

ಖಾತೆ ಬದಲಾವಣೆ ವಿಚಾರ ವದಂತಿ. ಅದನ್ನು ಹೇಳಿದ್ದು ಯಾರು ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ. ಏನೇ ಇದ್ದರೂ ನನ್ನನ್ನೇ ಕೇಳಬೇಕು ಅಲ್ಲವೇ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಪರಮೇಶ್ವರ್, ಒಬ್ಬರ ವ್ಯಕ್ತಿತ್ವ ಕೊಲೆ ಮಾಡಬಾರದು, ಇದು ಶೋಭೆ ತರುವುದಿಲ್ಲ. ನಾನು ಸೌಮ್ಯಮದಿಂದಲೇ ನಡೆದುಕೊಂಡಿದ್ದೇನೆ. ಏನೇ ಇದ್ದರೂ ನನ್ನನ್ನೇ ಕೇಳಿ, ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಪತ್ನಿ ಬಳಿಯೂ ರಾಜಕೀಯ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸಿ ಎಂದು ಸಿಎಂ ಹೇಳಿದ್ದಾರೆ ಎಂದಿದ್ದಾರೆ ಎಂದು ಹೇಳಬೇಡಿ, ದಯವಿಟ್ಟು ಈ ರೀತಿ ಮಾಡಬೇಡಿ. ನಮ್ಮ ಅಭಿಮಾನಿಗಳು, ಮತದಾರರು ಏನು ತಿಳಿದುಕೊಳ್ಳುತ್ತಾರೆ? ಇಂತಹ ಖಾತೆಯೇ ಬೇಕು ಎಂದು ನಾನು ಯಾವತ್ತೂ ಕೇಳಿಲ್ಲ. ಬೆಂಗಳೂರು ಘಟನೆಯಿಂದ ನಾವು ನೋವು ಅನುಭವಿಸುತ್ತಿದ್ದೇವೆ. ಇದು ಸವಾಲು, ಇದನ್ನು ಎದುರಿಸಬೇಕು. ಖಾತೆ ಬದಲಾವಣೆಯ ಬಗ್ಗೆ ನಾನು ಸಿಎಂ ಬಳಿ ಹೇಳಿಕೊಂಡಿಲ್ಲ. ಇದು ಸತ್ಯಕ್ಕೆ ದೂರವಾದುದು, ಇದು ಸುಳ್ಳು ಎಂದು ಪರಮೇಶ್ವರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular