HomeLatest NewsBIG NEWS: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಮಲ್ ಹಾಸನ್ ಗೆ ಭಾರಿ ಹಿನ್ನಡೆ

BIG NEWS: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಮಲ್ ಹಾಸನ್ ಗೆ ಭಾರಿ ಹಿನ್ನಡೆ

ನವದೆಹಲಿ: ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಬಹುಭಾಷಾ ನಟ ಕಮಲ್ ಹಾಸನ್ ಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಹಿನ್ನಡೆಯಾಗಿದೆ.

ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಮಲ್ ಹಾಸನ್, ಕನ್ನಡಿಗರ ಕ್ಷಮೆ ಕೋರದೇ ಉದ್ಧಟತನ ಮೆರೆದಿದ್ದರು. ಇದರ ಬೆನ್ನಲ್ಲೇ ಅವರ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಲಾಗಿತ್ತು. ಹೈಕೋರ್ಟ್ ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದ್ದರೂ, ನಟ ಕಮಲ್ ಹಾಸನ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ನೀಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನವಿ ಪರಿಶೀಲಿಸಿದ ಸುಪ್ರೀಂ ಕೋರ್ಟ್, ಕರ್ನಾಟ ಹೈಕೋರ್ಟ್ ಗೆ ಮನವಿ ಮಾಡುವಂತೆ ಸೂಚಿಸಿದೆ. ಹೈಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಇದರಿಂದಾಗಿ ಕಮಲ್ ಹಾಸನ್ ಗೆ ಮತ್ತೆ ಹಿನ್ನಡೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular