HomeLatest NewsBIG NEWS: ಬಿಜೆಪಿ ಅವಧಿಯ ಘೋರ ದುರಂತದ ಪಟ್ಟಿ ಕೊಡ್ತೀವಿ: ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

BIG NEWS: ಬಿಜೆಪಿ ಅವಧಿಯ ಘೋರ ದುರಂತದ ಪಟ್ಟಿ ಕೊಡ್ತೀವಿ: ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಆರ್ ಸಿಬಿ ಗೆದ್ದ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಟ್ವೀಟ್ ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು. ಕ್ರೀಡಾ ಅಭಿಮಾನಿಗಳಿಗೆ ಅವಮಾನ ಮಾಡುತ್ತಿದ್ದೀರಿ, ನಿಮಗೆ ಮೆರವಣಿಗೆ ನಡೆಸಲು ಆಗುವುದಿಲ್ಲವೇ ಎಂದು ಕೇಳಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಇದೇ ಪ್ರವೃತ್ತಿ ಹೊಂದಿದ್ದಾರೆ. ಜನ ಅವರಿಗೆ ಬಹುಮತ ನೀಡಿಲ್ಲ. ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಆಗಿರುವ ಘೋರ ದುರಂತಗಳ ಪಟ್ಟಿ ನೀಡುತ್ತೇವೆ. ಬಿಜೆಪಿ ನಾಯುಕರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈ ದಾಳಿಯಾದಾಗ ಮನಮೋಹನ್ ಸಿಂಗ್ ಅವರು ರಾಜಿನಾಮೆ ನೀಡಿದ್ದರೆ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಈ ಘಟನೆ ನಂತರ ವಿಲಾಸ್ ರಾವ್ ದೇಶ್ಮುಖ್ ಅವರು ರಾಜಿನಾಮೆ ನೀಡಿದ್ದರು. ಇದನ್ನು ಕುಮಾರಸ್ವಾಮಿ ಅವರು ಮರೆತು ಹೋಗಿದ್ದಾರೆ. ಇವರಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೆನಪಿಸಿಕೊಳ್ಳದೆ ಊಟ, ನಿದ್ದೆ ಏನೂ ಆಗುವುದಿಲ್ಲ. ಅವರು ಮೊದಲು ಆರೋಗ್ಯದ ಬಗ್ಗೆ ಗಮನವಿಡಲಿ, ಈ ರಾಷ್ಟ್ರದ ಜನರ ಸೇವೆ ಮಾಡಲಿ ಎಂದು ಮನವಿ ಮಾಡುತ್ತೇನೆ ಎಂದರು.

ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ಳುತ್ತಾನೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆಯೂ ಟಾಂಗ್ ನೀಡಿದ ಡಿ.ಕೆ.ಸುರೇಶ್, ಎಲ್ಲರ ಆರೋಗ್ಯವನ್ನು ದೇವರೇ ನೋಡಿಕೊಳ್ಳುವುದು. ಮಂಡ್ಯದ ಜನರ ಆಶೀರ್ವಾದ ಇರಬಹುದು ಕರ್ನಾಟಕದ ಜನರ ಹಾರೈಕೆ ಅಲ್ಲವಲ್ಲ. ಅವರು ಖುಷಿಯಾಗಿದ್ದರೆ ನಮಗೆ ಸಂತೋಷ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular