HomeLatest NewsBREAKING: ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಸ್ವಾಮೀಜಿಗಳಿಂದ ದೂರು ದಾಖಲು

BREAKING: ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ಸ್ವಾಮೀಜಿಗಳಿಂದ ದೂರು ದಾಖಲು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಆರ್ ಸಿಬಿ ಅಭಿಮಾನಿಗಳು ಸಾವು ಪ್ರಕರಣ ಸಂಬಂಧ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ನಾಲ್ವರ ವಿರುದ್ಧ ಸ್ವಾಮೀಜಿಗಳು ದೂರು ದಾಖಲಿಸಿದ್ದಾರೆ.

ಪ್ರಣವಾನಂದ ಸ್ವಾಮೀಜಿ ನೇತೃತ್ವದ ನಿಯೋಗ, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ದೂರು ನೀಡಿದೆ.

ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಪ್ರಣವಾನಂದ ಶ್ರೀ, ಕುಂಬಾರ ಗುಂಡಯ್ಯ ಶ್ರೀ ಸೇರಿದಂತೆ ಮೂವರು ಸ್ವಾಮೀಜಿಗಳು ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular