HomeLatest Newsಡಿಜಿ ಐಜಿಪಿ ಡಾ. ಎಂ‌.ಎ. ಸಲೀಂ ನೇಮಕ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್

ಡಿಜಿ ಐಜಿಪಿ ಡಾ. ಎಂ‌.ಎ. ಸಲೀಂ ನೇಮಕ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾನಿರೀಕ್ಷಕರು(ಡಿಜಿ ಐಜಿಪಿ)ಆಗಿ ಡಾ. ಎಂ.ಎ. ಸಲೀಂ ಅವರನ್ನು ನೇಮಿಸಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಸುಪ್ರೀಂಕೋರ್ಟ್ ನಿಯಮ ಉಲ್ಲಂಘಿಸಿ ಸಲೀಂ ಅವರನ್ನು ಡಿಜಿ ಐಜಿಪಿಯನ್ನಾಗಿ ನೇಮಕ ಮಾಡಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಕೋರಿ ವಕೀಲರಾದ ಸುಧಾ ಕಟ್ವಾ ಅರ್ಜಿ ಸಲ್ಲಿಸಿದ್ದಾರೆ.

ಪ್ರಕಾಶ್ ಸಿಂಗ್ ಪ್ರಕರಣ ಮತ್ತು ನಂತರದ ಆದೇಶಗಳಲ್ಲಿ ನಿಯಮಿತ ಡಿಜಿಪಿಯನ್ನು ಕೇಂದ್ರೀಯ ಲೋಕಸೇವಾ ಆಯೋಗದಿಂದ 3 ಹಿರಿಯ ಅಧಿಕಾರಿಗಳ ಪ್ಯಾನೆಲ್ ನಿಂದ ಆಯ್ಕೆ ಮಾಡಬೇಕು. ಮೆರಿಟ್, ಸೇವಾಹಿರಿತನ, ಅನುಭವದ ಆಧಾರದ ಮೇಲೆ ಇರಬೇಕು. ಅವರಿಗೆ ಕನಿಷ್ಠ ಎರಡು ವರ್ಷಗಳ ಅಧಿಕಾರವಧಿ ಇರಬೇಕು ಎಂದಿದೆ. ಅಲ್ಲದೆ ಕಾರ್ಯಕಾರಿ ಅಥವಾ ಪ್ರಭಾರ ಡಿಜಿಪಿಗಳ ನೇಮಕಾತಿ ಮಾಡಲು ಸುಪ್ರೀಂಕೋರ್ಟ್ ನಿಷೇಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಲೀಂ ಅವರನ್ನು ನೇಮಕ ಮಾಡಿರುವ ಸಂಬಂಧ ಯು.ಪಿ.ಎಸ್.ಸಿ.ಯಿಂದ ಆರ್‌ಟಿಐ ಅಡಿ ಮಾಹಿತಿ ಪಡೆಯಲಾಗಿದ್ದು, ನೇಮಕ ಪ್ರಕ್ರಿಯೆಯಲ್ಲಿ ಲೋಪವಿದೆ ಎನ್ನುವ ಅಂಶ ಗೊತ್ತಾಗಿದೆ. ಹೀಗಾಗಿ ಪ್ರಭಾರ ನೇಮಕಾತಿ ತಕ್ಷಣವೇ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಪ್ರಕಾರ ನೇಮಕಾತಿ ಪ್ರಕ್ರಿಯೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿ ವಿಚಾರಣೆಗೆ ಬರಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular