HomeLatest Newsಬೆಂಕಿ ತಗುಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಅತ್ತೆ, ಮಾವನ ವಿರುದ್ಧವೇ ದೂರು ನೀಡಿದ ಪತ್ನಿ

ಬೆಂಕಿ ತಗುಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಅತ್ತೆ, ಮಾವನ ವಿರುದ್ಧವೇ ದೂರು ನೀಡಿದ ಪತ್ನಿ

ಉಡುಪಿ: ಹೆಬ್ರಿ ತಾಲೂಕಿನ ಮಂಡಾಡಿಜೆಡ್ಡು ಬಳಿ ವ್ಯಕ್ತಿಯೊಬ್ಬರು ಬೆಂಕಿ ತಗುಲಿ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಸಂಗತಿ ಬಹಿರಂಗವಾಗಿದೆ.

ಅನೂಪ್ ನಾಯಕ್ ಮೃತಪಟ್ಟ ವ್ಯಕ್ತಿ. ಅವರ ಪತ್ನಿಯೇ ಪತಿಗೆ ಬೆಂಕಿ ತಗುಲಿ ಮೃತಪಟ್ಟ ಬಗ್ಗೆ ಹೆಬ್ರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಗ್ಯಾಸ್ ರಿಫಿಲ್ಲಿಂಗ್ ವೇಳೆ ಬೆಂಕಿ ತಗುಲಿ ಪತಿ ಮೃತಪಟ್ಟಿದ್ದು, ಇದಕ್ಕೆ ಅತ್ತೆ, ಮಾವ ಕಾರಣ ಎಂದು ಆರೋಪಿಸಿದ್ದಾರೆ.

ಏಪ್ರಿಲ್ 11ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಅನೂಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಏಪ್ರಿಲ್ 17ರಂದು ಮೃತಪಟ್ಟಿದ್ದರು. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಮನೆಯಲ್ಲಿ ಅಕ್ರಮವಾಗಿ ಗ್ಯಾಸ್ ರಿಫೀಲಿಂಗ್ ಮಾಡುತ್ತಿದ್ದು, ಈ ವೇಳೆ ಅತ್ತೆ ಬೇಜವಾಬ್ದಾರಿಯಿಂದ ಲೈಟರ್ ಹಚ್ಚಿದ ಕಾರಣ ಬೆಂಕಿ ಹೊತ್ತಿಕೊಂಡು ಅನೂಪ್ ಅವರಿಗೆ ಸುಟ್ಟ ಗಾಯಗಳಾಗಿ ಸಾವನ್ನಪ್ಪಿದ್ದಾರೆ. ಅವರ ತಂದೆ ಅನಂತನಾಯಕ್ ಮತ್ತು ತಾಯಿ ಆಶಾ ಅವರೇ ಇದಕ್ಕೆ ಕಾರಣವೆಂದು ಸೊಸೆ ರೇಷ್ಮಾ ಆರೋಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular