HomeLatest NewsDCET: 2ನೇ ವರ್ಷದ ಇಂಜಿನಿಯರಿಂಗ್ ಕೋರ್ಸ್ ನೇರ ಪ್ರವೇಶಕ್ಕೆ ಇಂದಿನಿಂದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ

DCET: 2ನೇ ವರ್ಷದ ಇಂಜಿನಿಯರಿಂಗ್ ಕೋರ್ಸ್ ನೇರ ಪ್ರವೇಶಕ್ಕೆ ಇಂದಿನಿಂದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ

ಬೆಂಗಳೂರು: 2ನೇ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ನೇರ ಪ್ರವೇಶ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶ ಅರ್ಹತೆಗಾಗಿ ಜೂನ್ 10 ರಿಂದ 13 ರವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಲಾಗುವುದು.

ದಾಖಲಾತಿ ಪರಿಶೀಲನೆ ನಡೆಯುವ 37 ಕಾಲೇಜುಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಸಮೀಪವಿರುವ ಕಾಲೇಜಿಗೆ ಮುಂಗಡವಾಗಿ ದಿನಾಂಕ ನಿಗದಿ ಮಾಡಿ ಹೋಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು, ವಿಶೇಷ ಪ್ರವರ್ಗದ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular