ಬೆಂಗಳೂರು : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ಮೆಯೋಹಾಲ್ ಜಂಕ್ಷನ್ ನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಅಂಜಲಿ (36) ಎಂದು ಗುರುತಿಸಲಾಗಿದೆ. ಜಂಕ್ಷನ್ ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಮುಂದೆ ಇದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ನಲ್ಲಿದ್ದ ವಿಜಯ್ ಕುಮಾರ್ ಹಾಗೂ ಅಂಜಲಿಗೆ ಗಂಭೀರವಾಗಿ ಗಾಯವಾಗಿದೆ, ಆದರೆ ಅಂಜಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

