HomeLatest NewsBIG NEWS : ಆ. 15ರಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ನೀರಿನ ಬಾಟಲ್ ,...

BIG NEWS : ಆ. 15ರಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ನೀರಿನ ಬಾಟಲ್ , ಪ್ಲಾಸ್ಟಿಕ್ ನಿಷೇಧ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯದ ಮುಜರಾಯಿ ದೇವಾಲಯಗಳನ್ನು ಬರುವ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ.

ಆಗಸ್ಟ್ 15ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುವುದು. ಈ ಆದೇಶ ಜಾರಿಗೆ ಎರಡು ತಿಂಗಳು ಸಮಯ ಕೊಡಲಾಗಿದ್ದು, ಆಗಸ್ಟ್ 15ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular