HomeKarnatakaBIG NEWS : 'ಬೆಂಗಳೂರು ಕಾಲ್ತುಳಿತ ದುರಂತ' : CM ಸಿದ್ದರಾಮಯ್ಯಗೆ ಬಹಿರಂಗ ಪತ್ರ...

BIG NEWS : ‘ಬೆಂಗಳೂರು ಕಾಲ್ತುಳಿತ ದುರಂತ’ : CM ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಬಿ.ವೈ ವಿಜಯೇಂದ್ರ.!

ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತ ನಡೆದ ಕುರಿತು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಬಹಿರಂಗ ಪತ್ರ ಬರೆದಿದ್ದಾರೆ.

ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ಮುಖ್ಯಮಂತ್ರಿಗಳು ಮತ್ತು ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ, ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ. ಕುಟುಂಬ ಬೆಳಗಬೇಕಿದ್ದ, ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ. ಸಾವಿಗೀಡಾದ ಹನ್ನೊಂದು ಜನರ ಪೈಕಿ ಮನೋಜ್ ಎಂಬ ಯುವಕನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದ ಆತನ ಅಜ್ಜಿ ಆಹಾರ ತ್ಯಜಿಸಿ ಪ್ರಾಣ ಬಿಟ್ಟಿರುವ ಸುದ್ದಿ ನೋವು ತರಿಸಿದೆ. ದುರಂತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬ ಯಾವ ಪರಿಯಲ್ಲಿ ರೋದಿಸುತ್ತಿದೆ ಎಂಬುದನ್ನು ಮೃತ ದೇವೀರಮ್ಮನವರ ಸಾವು ಸಾಕ್ಷೀಕರಿಸುತ್ತಿದೆ.

ರಾಷ್ಟ್ರ- ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ, ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ಸರ್ಕಾರಕ್ಕೂ ಈ ಘಟನೆಗೂ ಸಂಬಂಧವಿಲ್ಲ, ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು ಎಂಬ ಮುಖ್ಯಮಂತ್ರಿಗಳ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯಲಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular