HomeLatest NewsBIG NEWS : ಪ್ರವಾಸಿಗರೇ ಗಮನಿಸಿ : ನಂದಿಬೆಟ್ಟಕ್ಕೆ ಜೂ.16 ರಿಂದ 5 ದಿನಗಳ...

BIG NEWS : ಪ್ರವಾಸಿಗರೇ ಗಮನಿಸಿ : ನಂದಿಬೆಟ್ಟಕ್ಕೆ ಜೂ.16 ರಿಂದ 5 ದಿನಗಳ ಕಾಲ ಪ್ರವೇಶ ನಿರ್ಬಂಧ |Nandi Hills

ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣ ನಂದಿ ಗಿರಿಧಾಮಕ್ಕೆ ಐದು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮಾಹಿತಿ ನೀಡಿದೆ.

ನಂದಿಗಿರಿಧಾಮದಲ್ಲಿ ಜೂನ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 16ರಿಂದ 5 ದಿನಗಳ ಕಾಲ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಜೂನ್ 16ರ ಸಂಜೆ 6 ಗಂಟೆಯಿಂದ ಜೂನ್ 20ರ ನಸುಕಿನ ಜಾವ 5 ಗಂಟೆಯವರೆಗೂ ಪ್ರವಾಸಿಗರು, ಸಾರ್ವಜನಿಕರಿಗೆ ನಂದಿ ಬೆಟ್ಟಕ್ಕೆ ಪ್ರವೇಶವಿಲ್ಲ. ಈ ಹಿನ್ನೆಲೆಯಲ್ಲಿ ಈದಿನ ನಂದಿಬೆಟ್ಟಕ್ಕೆ ಬರದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎಸ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂದಿ ಬೆಟ್ಟದ ಮೇಲಿನ ಅತಿಥಿ ಗೃಹಗಳ ಕಾರ್ಯ ಚಟುವಟಿಕೆಗೂ ನಿರ್ಬಂಧ ಹೇರಲಾಗಿದೆ. ಜೂನ್ 17ರಿಂದ 19ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳ ಬುಕಿಂಗ್ ರದ್ದು ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular