ಬೆಂಗಳೂರು : ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರು ಹೊರವಲಯದ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ರೌಡಿಶೀಟರ್ ನನ್ನು ಪುನೀತ್ ಅಲಿಯಾಸ್ ನೇಪಾಳಿ ಎಂದು ಗುರುತಿಸಲಾಗಿದೆ. ಕಾಡುಗೋಡಿ ಠಾಣೆಯ ರೌಡಿಶೀಟರ್ ಪುನೀತ್ ನನ್ನು ಕೊಂದಿದ್ದಾರೆ.
ಮಂಗಳವಾರ ರಾತ್ರಿ ಕಾಡುಗೋಡಿಯ ವಿಜಯಲಕ್ಷ್ಮಿ ಲೇಔಟ್ ಬಳಿ ಪುನೀತ್ ಇರುವುದನ್ನ ನೋಡಿದ ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಘಟನೆ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:ರೌಡಿಶೀಟರ್