HomeLatest NewsBREAKING: ದುಷ್ಕರ್ಮಿಯ ಅಟ್ಟಹಾಸ: ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಅಧಿಕಾರಿ ಸಾವು!

BREAKING: ದುಷ್ಕರ್ಮಿಯ ಅಟ್ಟಹಾಸ: ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಅಧಿಕಾರಿ ಸಾವು!

ವಿಜಯಪುರ: ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಮೃತ ಅಧಿಕಾರಿ. ಇಂದು ಬೆಳಿಗ್ಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ರೇಣುಕಾ ಅವರನ್ನು ತಡೆದ ದುಷ್ಕರ್ಮಿ ಸಂಜು ಬನಸೋಡೆ ಎಂಬಾತ ಏಕಾಏಕಿ ರೇಣುಕಾ ಅವರಿಗೆ ಮನಬಂದಂತೆ ಚಾಕು ಇರಿದು ಪರರೈಯಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೇಣುಕಾ ಕನ್ನೊಳ್ಳಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಚಾಕು ಇರಿದ ಆರೋಪಿ ಸಂಜು ಬನಸೋಡೆಯನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular