ಬೆಂಗಳೂರು : ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು (ILO) 2002 ರಲ್ಲಿ ಜೂನ್-12ನೇ ದಿನವನ್ನು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” ಎಂದು ಘೋಷಣೆ ಮಾಡಿರುತ್ತದೆ. ಅಂದಿನಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು, ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್ 12 ಅನ್ನು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನಾಗಿ ಆಚರಿಸುತ್ತಾ ಬರುತ್ತಿವೆ.
ಈ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸರ್ಕಾರದ ಎಲ್ಲಾ ಇಲಾಖೆ/ನಿಗಮ/ಮಂಡಳಿ / ಪ್ರಾಧಿಕಾರ / ಸಂಸ್ಥೆ / ನಿರ್ದೇಶನಾಲಯ ಶಾಲಾ ಕಾಲೇಜು/ಕಛೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರುಗಳಿಗೆ 12ನೇ ಜೂನ್ 2025ರಂದು “ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲವೆಂಬ ಪ್ರಮಾಣ ವಚನ’ (ಪ್ರತಿ ಲಗತ್ತಿಸಿದೆ) ವನ್ನು ಬೋಧಿಸಲು ರಾಜ್ಯದ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳಿಗೆ ಸೂಚಿಸಿದೆ.



TAGGED:ಬಾಲಕಾರ್ಮಿಕ ವಿರೋಧಿ' ದಿನ