HomeLatest Newsಮಳೆ ಅಬ್ಬರಕ್ಕೆ ಡಿಪೋಗೆ ನುಗ್ಗಿದ ನೀರು: ಕೆ.ಎಸ್.ಆರ್.ಟಿ.ಸಿ ಬಸ್ ಗಳು ಜಲಾವೃತ

ಮಳೆ ಅಬ್ಬರಕ್ಕೆ ಡಿಪೋಗೆ ನುಗ್ಗಿದ ನೀರು: ಕೆ.ಎಸ್.ಆರ್.ಟಿ.ಸಿ ಬಸ್ ಗಳು ಜಲಾವೃತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರದಲ್ಲಿ ಡಿಪೋಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಕಾರವಾರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಸಂಪೂರ್ಣ ಜಲಾವೃತಗೊಂಡಿದ್ದು, ಬಸ್ ಗಳು ನೀರಿನಲ್ಲಿ ಮುಳುಗಿವೆ. ಡಿಪೋದಿಂದ ಬಸ್ ಗಳನ್ನು ಹೊರತೆಗೆಯಲು ಚಾಲಕರು ಪರದಾಟ ನಡೆಸಿದ್ದಾರೆ.

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ಮತ್ತೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಜಿಲ್ಲೆಯಲ್ಲಿ ನಾಳೆ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular