HomeLatest Newsಇಂದು 'ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ' ದಿನ : 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ...

ಇಂದು ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ’ ದಿನ : 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ 50,000 ದಂಡ, 3 ವರ್ಷ ಜೈಲುಶಿಕ್ಷೆ ಫಿಕ್ಸ್.!

ಬೆಂಗಳೂರು : ಇಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ. ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ಅನ್ವಯ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದ್ದು ನಿರಂತರ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ವಿಶೇಷ ಯೋಜನೆಗಳನ್ನು ಜಾರಿಮಾಡಲಾಗಿದೆ.ಬಾಲ ಹಾಗೂ ಕಿಕೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1985 ರ ಪರಿಣಾಮಕಾರಿ ಅನುಷ್ಠಾನ.

  • ಸರ್ಕಾರದ 11 ಇಲಾಖೆಗಳ ಅಧಿಕಾರಿಗಳನ್ನು ನಿರೀಕ್ಷಕರುಗಳನ್ನಾಗಿ ನೇಮಕ ಮಾಡಲಾಗಿದ್ದು, ಅಧಿಕಾರಿಗಳ ತಂಡದ ಮೂಲಕ ನಿಯೋಜಿತ ಹಾಗೂ ಅನಿರೀಕ್ಷಿತ ದಾಳಿಗಳನ್ನು ಕೈಗೊಳ್ಳಲಾಗುತ್ತಿದೆ.
  • ಕೆಲಸದಲ್ಲಿ ತೊಡಗಿರುವ ಬಾಲಕಾರ್ಮಿಕ ಹಾಗೂ ತಿಶೋರ ಕಾರ್ಮಿಕರು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ರಕ್ಷಿಸಿ ಕೆಲಸದಿಂದ ಬಿಡುಗಡೆಗೊಳಿಸಿ ಶಿಕ್ಷಣ ಮುಂದುವರಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
    ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಗಳನ್ನು ಸ್ಥಾಪಿಸಲಾಗಿದೆ
  • ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿ ಕೊಂಡಲ್ಲಿ, ಮೊದಲ ಅಪರಾಧಕ್ಕೆ ಮಾಲೀಕರಿಗೆ 06 ತಿಂಗಳಿಂದ 02 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ. 20,000/- ರಿಂದ ರೂ. 50,000/- ಗಳವರೆಗೆ ದಂಡ ಅಥವಾ ಎರಡೂ. ಪುನರಾವರ್ತಿತ ಅಪರಾಧಕ್ಕೆ 01 ವರ್ಷದಿಂದ 03 ವರ್ಷಗಳವರೆಗೆ ಜೈಲು ಶಿಕ್ಷೆ.
  • ಮಕ್ಕಳನ್ನು ಕೆಲಸಕ್ಕೆ ದೂಡುವ ಪೋಷಕರಿಗೂ ಸಹ ಶಿಕ್ಷಾ ಪ್ರಾವಧಾನವಿದ್ದು, ಪುನರಾವರ್ತಿತ ಅಪರಾಧಕ್ಕೆ ರೂ. 10,000/- ಗಳ ದಂಡ.
  • ತಪ್ಪಿತಸ್ಥ ಮಾಲೀಕರು ತಾವು ನಿಯೋಜಿಸಿಕೊಂಡ ಪ್ರತಿ ಮಗುವಿಗೆ ರೂ. 20,000/- ಗಳಂತೆ ಮಕ್ಕಳ ಪುನರ್ವಸತಿ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ. ಸರ್ಕಾರದ ವತಿಯಿಂದ ಪ್ರತಿ ಮಗುವಿಗೆ ರೂ. 15,000/- ಗಳ ಸಮಾನಂತರ ವಂತಿಕೆಯನ್ನು ನಿಧಿಗೆ ಪಾವತಿಸಲಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular