HomeLatest NewsBREAKING : 'ಮೆಡಿಕಲ್ ಕಾಲೇಜಿನ ಹಾಸ್ಟೆಲ್' ಕಟ್ಟಡದ ಮೇಲೆ 'ಏರ್ ಇಂಡಿಯಾ' ವಿಮಾನ ಪತನ...

BREAKING : ‘ಮೆಡಿಕಲ್ ಕಾಲೇಜಿನ ಹಾಸ್ಟೆಲ್’ ಕಟ್ಟಡದ ಮೇಲೆ ‘ಏರ್ ಇಂಡಿಯಾ’ ವಿಮಾನ ಪತನ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ.!

ಗುಜರಾತ್ : ಹಾಸ್ಟೆಲ್ ಕಟ್ಟಡದ ಮೇಲೆ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ ವ್ಯಕವಾಗಿದೆ. ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಊಟ ಮಾಡುತ್ತಿರುವ ವೇಳೆಯೇ ವಿಮಾನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡಿದೆ. ಬಿ.ಜೆ. ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡದ ಮೇಲೆ ವಿಮಾನ ಅಪ್ಪಳಿಸಿದೆ.

ಗುರುವಾರ ಅಹಮದಾಬಾದ್-ಲಂಡನ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಅಪಘಾತಕ್ಕೀಡಾಗಿದ್ದು, ಭಾರಿ ದುರಂತ ಸಂಭವಿಸಿದೆ. ವರದಿಗಳ ಪ್ರಕಾರ, ಈ ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ. 10 ಕ್ಯಾಬಿನ್ ಸಿಬ್ಬಂದಿ ಮತ್ತು 2 ಪೈಲಟ್ಗಳು ಸೇರಿದಂತೆ ಒಟ್ಟು 242 ಜನರು ವಿಮಾನದಲ್ಲಿದ್ದರು.

ಘಟನೆ ಸಂಬಂಧ ಸಹಾಯವಾಣಿ ತೆರೆಯಲಾಗಿದ್ದು, 1800 5691 444 ಗೆ ಸಂಪರ್ಕಿಸಬಹುದಾಗಿದೆ. ಮಾಧ್ಯಮ ಸಂಬಂಧಿತ ಯಾವುದೇ ಪ್ರಶ್ನೆಗಳಿಗೆ ಏರ್ ಇಂಡಿಯಾದ ಮಾಧ್ಯಮ ಸಂಪರ್ಕ ಸಂಖ್ಯೆ +91 9821414954 ಅನ್ನು ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular