HomeLatest NewsBREAKING NEWS: ಅಹಮದಾಬಾದ್ ನಲ್ಲಿ ವಿಮಾನ ಪತನ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು

BREAKING NEWS: ಅಹಮದಾಬಾದ್ ನಲ್ಲಿ ವಿಮಾನ ಪತನ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ ಎಪಿ ಗುಜರಾತ್ ಕಮಿಷನರ್ ನೀಡಿದ ಮಾಹಿತಿ ಪ್ರಕಾರ ಅಧಿಕೃತ ಮಾಹಿತಿ ನೀಡಿದ್ದು, ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದ್ದರು. ವಿಮಾನ ದುರಂತದಲ್ಲಿ ಅವರೂ ಮೃತಪಟ್ಟಿದ್ದಾರೆ.

ವಿಜಯ್ ರೂಪಾನಿ ಲಂಡನ್ ನಲ್ಲಿರುವ ತಮ್ಮ ಮಗಳ ಮನೆಗೆ ತೆರಳುತ್ತಿದ್ದರು. ಈ ವೇಳೆ ವಿಮಾನ ದುರಂತ ಸಂಭವಿಸಿದೆ. ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಅಹಲದಾಬಾದ್ ಏರ್ ಪೋರ್ಟ್ ಬಳಿಯೇ ಕಟ್ಟಡಗಳಿಗೆ ಡಿಕ್ಕಿ ಹೊಡೆದು ನೆಲಕ್ಕಪ್ಪಳಿಸಿ ಪತನಗೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲಾ 242 ಜನರೂ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular