ಬೆಂಗಳೂರು : ಕರ್ನಾಟಕ SSLC ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಬಂದಿದೆ.
ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈ ಕುರಿತು ಸುತ್ತೋಲೆ ಹೊರಡಿಸಿದೆ.
ಮೇ 2025ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನ್ನು ದಿನಾಂಕ:26.05.2025 ರಿಂದ 02.06.2025 ರವರೆಗೆ ನಡೆಸಲಾಯಿತು. ಕಾರ್ಯವು ಮುಕ್ತಾಯವಾಗಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ , https://karresults.nic.in ದಿನಾಂಕ:13.06.2025 ರಂದು ಮಧ್ಯಾಹ್ನ 01.00 ನಂತರ ವೀಕ್ಷಿಸಬಹುದಾಗಿದೆ. ಸದರಿ ಅಂಶವನ್ನು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು / ಪೋಷಕರ ಗಮನಕ್ಕೆ ತರಲು ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದೆ.

You Might Also Like
TAGGED:SSLC