HomeLatest NewsBIG NEWS : ಯಜಮಾನಿಯರೇ ಗಮನಿಸಿ : 'ಗೃಹಲಕ್ಷ್ಮಿ' ಹಣ ಬಾರದೇ ಇದ್ದರೆ ತಪ್ಪದೇ ಈ...

BIG NEWS : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ |Gruha Lakshmi Scheme

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 778 NPCI Failure/ E-KYC Failure ಫಲಾನುಭವಿಗಳು ಇದ್ದು ಫಲಾನುಭವಿಗಳಿಗೆ ಹಣ ಪಾವತಿಯಾಗದಿದ್ದ ಸಂದರ್ಭದಲ್ಲಿ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್‍ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್‍ಪುಸ್ತಕ ಒಂದು ಅಥವಾ ಇತರೆ ಪಾಸ್‍ಪುಸ್ತಕ ಇದ್ದಲ್ಲಿ ತೆಗೆದುಕೊಂಡು ಬಂದು ಸರಿಪಡಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular