HomeLatest NewsBIG NEWS: ಮಳೆ ಅಬ್ಬರಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕ : ದುರಂತ...

BIG NEWS: ಮಳೆ ಅಬ್ಬರಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕ : ದುರಂತ ಸಾವು

ಬೆಳಗಾವಿ: ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ಪ್ರವಾಹದಂತೆ ಉಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿದ್ದ ಆಟೋ ಚಾಲಕ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯರಗಟ್ಟಿ ತಾಲೂಕಿನ ಚಿಕ್ಕಬೂದೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹಳ್ಳದ ನೀರಿನಲ್ಲಿ ಆಟೋ ದಾಟಿಸಲು ಹೋಗಿ ಆಟೋ ಸಮೇತ ಚಾಲಕ ಕೊಚ್ಚಿ ಹೋಗಿದ್ದಾನೆ. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಗ್ರಾಮಸ್ಥರು ಬೀಡು ಬಿಟ್ಟಿದ್ದು, ಆತೋ ಚಾಲಕನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular