HomeLatest NewsBIG NEWS: ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

BIG NEWS: ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಜೋರಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಇಂದಿನಿಂದ ರಾಜ್ಯದಲ್ಲಿ ವರುಣಾರ್ಭಟ ಮತ್ತಷ್ಟು ಜೋರಾಗಲಿದೆ. ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಆರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ, ಬೆಳಗಾವಿ, ಹಾವೇರಿ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರಿಸಲಿದ್ದು, ಮುಂಜಾಗೃತಾ ಕ್ರಮವಾಗಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಜೂನ್ 17 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular