HomeLatest NewsBIG NEWS: ಸಿಎಂ ಸಿದ್ದರಾಮಯ್ಯನವರನ್ನು ನೋಡಿದರೆ ಪಾಪ ಅನ್ನಿಸುತ್ತದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

BIG NEWS: ಸಿಎಂ ಸಿದ್ದರಾಮಯ್ಯನವರನ್ನು ನೋಡಿದರೆ ಪಾಪ ಅನ್ನಿಸುತ್ತದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನೋಡಿದರೆ ಪಾಪ ಅನ್ನಿಸುತ್ತದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲೂ ಆಗುತ್ತಿಲ್ಲ, ಅಭಿವೃದ್ಧಿಗೂ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಕೇಂದ್ರದ ಯೋಜನೆಗಳಿಗೂ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಆರೋಪ ಸರಿಯಲ್ಲ. ಕಾಲ್ತುಳಿತ ದುರಂತವನ್ನು ಡೈವರ್ಟ್ ಮಾಡಲು ಜಾತಿಗಣತಿ ಮರು ಸರ್ವೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಆರಂಭಿಸಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular