HomeLatest NewsBREAKING: ನವೆಂಬರ್ ನಲ್ಲಿ ಸಿಎಂ ಬದಲಾವಣೆ ಖಚಿತ: ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಭವಿಷ್ಯ!

BREAKING: ನವೆಂಬರ್ ನಲ್ಲಿ ಸಿಎಂ ಬದಲಾವಣೆ ಖಚಿತ: ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಭವಿಷ್ಯ!

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ನವೆಂಬರ್ ತಿಂಗಳಿನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ನವೆಂಬರ್ ನಲ್ಲಿ ಸಿಎಂ ಬದಲಾವಣೆಯಾಗುವುದು ಖಚಿತ ಎಂದು ಹೇಳಿದ್ದಾರೆ. ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಬದಲಾವಣೆಯಾಗಲಿದೆ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular