ಗುರುವಾರ ಅಹಮದಾಬಾದ್ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 274 ಕ್ಕೆ ಏರಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ AI 171 ವಿಮಾನವು ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳ ನಂತರ ಬಿಜೆ ವೈದ್ಯಕೀಯ ಹಾಸ್ಟೆಲ್ ಮತ್ತು ಅದರ ಕ್ಯಾಂಟೀನ್ ಸಂಕೀರ್ಣಕ್ಕೆ ಅಪ್ಪಳಿಸಿತು. ದುರಂತದಲ್ಲಿ ಸ್ಥಳೀಯರು ಸೇರಿ ಹಲವರು ನಾಪತ್ತೆ ಆಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ವಿಮಾನದಲ್ಲಿದ್ದ 241 ಮಂದಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಹೊರತಾಗಿ ಮೆಡಿಕಲ್ ಕಾಲೇಜಿನ ಕ್ಯಾಂಪಸ್ ನಲ್ಲಿದ್ದ 33 ಜನರು ಮೃತಪಟ್ಟಿದ್ದಾರೆ.
TAGGED:ವಿಮಾನ ದುರಂತ