ಯಾದಗಿರಿ : ಯಾದಗಿರಿಯಲ್ಲಿ 440.63 ರೂ. ಕೋಟಿ ರೂ ವೆಚ್ಚದ ‘ಆರೋಗ್ಯ ಆವಿಷ್ಕಾರ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಯಾದಗಿರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ ₹440.63 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿದಂತೆ ಹಲವು ಸಚಿವರು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

