HomeLive NewsRain alert Karnataka : ರಾಜ್ಯದ ಹಲವೆಡೆ ಜೂ.19 ರವರೆಗೆ ಭಾರಿ ಮಳೆ :...

Rain alert Karnataka : ರಾಜ್ಯದ ಹಲವೆಡೆ ಜೂ.19 ರವರೆಗೆ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ , ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಜೂನ್ 19 ರವರೆಗೆ ಈ ಭಾಗಗಳಲ್ಲಿ ಗುಡುಗು, ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಂಗಳೂರಿನ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಪ್ರಮುಖ ರಸ್ತೆಗಳು ಜಲಾವೃತಗೊಂಡಿದೆ. ಜೂನ್ 19 ರವರೆಗೆ ರಾಜ್ಯದ ಹಲವು ಕಡೆ ಗುಡುಗು, ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular