ಹಾಸನ : ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ.
ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ಕಿಡ್ಸ್ ಶಾಲೆ ಸೇರಿ ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಶಾಲೆಯ ಕಟ್ಟಡವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹಾಸನ ನಗರ, ಗ್ರಾಮಾಂತರ ಠಾಣೆಗೆ ಶಾಲೆಯ ಮುಖ್ಯೋಪಾಧ್ಯಾಯರು ದೂರು ನೀಡಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

