HomeLatest NewsBIG NEWS: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಹಾಂಕಾಂಗ್ ಗೆ ವಾಪಾಸ್

BIG NEWS: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಹಾಂಕಾಂಗ್ ಗೆ ವಾಪಾಸ್

ಗುಜರಾತ್ ನ ಅಹಮದಾಬಾದ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಏರ್ ಇಂಡಿಯಾ ವಿಮಾನ ಪತನಗೊಂಡು 274 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಸಾಲು ಸಾಲು ವಿಮಾನಗಾಳಲ್ಲಿ ತಾಂತ್ರಿಕ ದೋಷಗಳು ಕಂಡುಬರುತ್ತಿವೆ.

ತಾಂತ್ರಿಕ ದೋಷದಿಂದ ಲಕ್ನೋದಲ್ಲಿ ಸೌದಿ ಏರ್ ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದ ಬೆನ್ನಲ್ಲೇ ಲಂಡನ್ ನಲ್ಲಿ ಬ್ರಿಟಿಷ್ ಏರ್ ಲೈನ್ಸ್ ವಿಮಾನ ಕೂಡ ತಾಂತ್ರಿಕ ದೋಷದಿಂದಾಗಿ ಮತ್ತೆ ಲಂಡನ್ ಗೆ ವಾಪಾಸ್ ಆಗಿತ್ತು. ಇದೀಗ ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

ಹಾಂಕಾಂಗ್ ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ಮತ್ತೆ ಹಾಂಕಾಂಗ್ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನದಲ್ಲಿ ತಾಂತ್ರಿಕ ದೋಷದ ಬಗ್ಗೆ ಪೈಲಟ್ ಅನುಮಾನ ವ್ಯಕ್ತಪಡಿಸಿದ್ದರು. ಕೂಡಲೇ ವಿಮಾನವನ್ನು ಹಾಂಕಾಂಗ್ ವಿಮಾನ ನಿಲ್ದಾಣದಲ್ಲೇ ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನವನ್ನು ತಪಾಸಣೆ ನಡೆಸಲಾಗುತ್ತಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular