HomeLatest NewsGOOD NEWS : ರಾಜ್ಯದಲ್ಲಿ ಶೀಘ್ರವೇ 13,500 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ...

GOOD NEWS : ರಾಜ್ಯದಲ್ಲಿ ಶೀಘ್ರವೇ 13,500 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ

ಬಳ್ಳಾರಿ : ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯು ಸಹ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ನಮ್ಮ ಸರ್ಕಾರ ಶಾಲೆಗಳಿಗೆ ಮೂಲಭೂತ ಸೌಕರ್ಯ, ಗುಣಮಟ್ಟ ಶಿಕ್ಷಣದ ಬೋಧನೆಗೆ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ನಿರ್ಧರಿಸ ಲಾಗಿದೆ. ಇದಕ್ಕೆ ಮುಖ್ಯಮಂತ್ರಿಯವರು ಸಮ್ಮತಿ ನೀಡಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತಮ ಫಲಿತಾಂಶಕ್ಕೆ ಕಾರ್ಯಯೋಜನೆ

ಅಧಿಕಾರಿಗಳು ಉತ್ತಮ ಫಲಿತಾಂಶಕ್ಕೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕು.ಮಕ್ಕಳಿಗೆ ಪರೀಕ್ಷಾ ಭಯದಿಂದ ಮುಕ್ತಗೊಳಿಸಿ, ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುವ ಕುರಿತು.ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ತಾಲೂಕುಗಳಲ್ಲಿನ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.ಪಠ್ಯಪುಸ್ತಕ/ಸಮವಸ್ತ್ರ/ಶೂ-ಸಾಕ್ಸ್ ಗಳನ್ನು ನಿಗಧಿತ ಅವಧಿಯೊಳಗೆ ಪೂರೈಸುವ ಕುರಿತು.ಅಧಿಕಾರಿಗಳು ಶಾಲೆಗಳನ್ನು ದತ್ತುಪಡೆದ ರೀತಿಯಲ್ಲಿ ಕಾಳಜಿ ವಹಿಸಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕುರಿತು..ಶಾಲೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತು ಸೂಚನೆ ನೀಡಿದರು.

ಶಿಕ್ಷಣ ಇಲಾಖೆಯಲ್ಲಿ 6 ಸಾವಿರಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಒಬ್ಬೊಬ್ಬರು ಒಂದು ಮಗುವನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಸಂಕಲ್ಪ ಮಾಡುವ ಕುರಿತು. ಗಡಿ ಭಾಗದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ಕ್ರಮಕೈಗೊಳ್ಳುವ ಕುರಿತು. ಶಾಲಾ ಆಸ್ತಿ ನೋಂದಣಿಗೆ ಮುತುವರ್ಜಿ ವಹಿಸುವ ಬಗ್ಗೆ ಸೂಚನೆ ನೀಡಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular