HomeLatest NewsBIG NEWS : 'ಕೃಷಿ ಡಿಪ್ಲೊಮಾ ಕೋರ್ಸ್' ಪ್ರವೇಶಾತಿಗೆ ಅರ್ಜಿ ಆಹ್ವಾನ : ಕೃಷಿ ಕಾರ್ಮಿಕರ...

BIG NEWS : ‘ಕೃಷಿ ಡಿಪ್ಲೊಮಾ ಕೋರ್ಸ್’ ಪ್ರವೇಶಾತಿಗೆ ಅರ್ಜಿ ಆಹ್ವಾನ : ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ.!

ಪ್ರಸಕ್ತ (2025-26) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಡಿಪ್ಲೊಮಾ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್, 27 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದಾಗಿದೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪ.ಜಾ. ಮತ್ತು ಪ.ಪಂ./ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪೆÇ್ಲೀಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲೇಜು ಮತ್ತು ವಿಳಾಸ: ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ- 576213, ಉಡುಪಿ ಜಿಲ್ಲೆ. ದೂ.ಸಂ.9108241342, 9686405090, 9901355032 ಇ-ಮೇಲ್ [email protected] Website: www.uahs.edu.in ನ್ನು ಸಂಪರ್ಕಿಸಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular