HomeLatest NewsBREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ 'CCB' ಪೊಲೀಸರ ದಾಳಿ, ಅಪಾರ ಪ್ರಮಾಣದ ನಿಷೇಧಿತ...

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ‘CCB’ ಪೊಲೀಸರ ದಾಳಿ, ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಜಪ್ತಿ.!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದಲ್ಲಿ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಪರಪ್ಪನ ಅಗ್ರಹಾರ ಕಾರಾಗೃಹದ ಸಜಾಬಂಧಿ ಬ್ಯಾರಕ್ ಹಾಗೂ ವಿಐಪಿ ಬ್ಯಾರಕ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕಸೂರಿ ಮೇತಿ, ತಂಬಾಕು, ಹೊಗೆ ಸೊಪ್ಪು, ಗಾಂಜಾ, ಚಾಕು, ಕತ್ತರಿ, ಕಬ್ಬಿಣದ ರಾಡ್, ಮೊಬೈಲ್ ಚಾರ್ಜರ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.

ನಿನ್ನೆ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿಸಿಬಿಯ 50ಕ್ಕೂ ಹೆಚ್ಚು ಅಧಿಕಾರಿಗಳು ದಾಲಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಅಪಾರ ಪ್ರಮಾಣದ ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular