ನವದೆಹಲಿ : ಕರ್ನಾಟಕದಲ್ಲಿ ‘ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಹೌದು, ಕಮಲ್ ಹಾಸನ್ ನಟನೆಯ ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕಮಲ್ ಹಾಸನ್ ಅವರ ತಮಿಳು ಚಿತ್ರ ‘ಥಗ್ ಲೈಫ್’ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದ್ದು, ನಟನ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ತಡೆಯುವುದಾಗಿ ಬೆದರಿಕೆ ಹಾಕಿರುವ ಗುಂಪುಗಳನ್ನು ತರಾಟೆಗೆ ತೆಗೆದುಕೊಂಡಿದೆ.
ಚಿತ್ರ ಬಿಡುಗಡೆಗೆ ಬೆದರಿಸುವುದು, ಅಡ್ಡಿ ಮಾಡೋದು ಸರಿಯಲ್ಲ. ನಿಮಗೆ ಇಷ್ಟ ಅಲ್ಲ ಅಂದರೆ ಸಿನಿಮಾ ನೋಡಬೇಡಿ ಎಂದು ಸುಪ್ರೀಂಕೋರ್ಟ್ ಹೇಳಿದೆ.