HomeLatest Newsಮಣಿಪುರ ಹಿಂಸಾಚಾರದ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ.!

ಮಣಿಪುರ ಹಿಂಸಾಚಾರದ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ.!

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
‘
ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ?

ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ? ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು. ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular