HomeLatest Newsಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಮಂಗಳೂರು: ಮಾರುತಿ ಸ್ವಿಫ್ಟ್ ಕಾರು ಪಲ್ಟಿಯಾಗಿ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ನಂತೂರು ಮತ್ತು ಪಂಪ್ ವೆಲ್ ನಡುವೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇನ್ನೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕೇರಳದ ಅಲಪ್ಪುಝು ನಿವಾಸಿ ಡಾ.ಮೊಹಮ್ಮದ್ ಅಮಲ್ ಎಂದು ಗುರುತಿಸಲಾಗಿದೆ. ಪಿಸಿಯೋಥೆರಪಿ ಪದವಿ ವಿದ್ಯಾರ್ಥಿ. ದೇರಳಕಟ್ಟೆ ಬಳಿ ಕಾಲೇಜಿನಲ್ಲಿ ವಿದ್ಯಾಭ್ಯಾಸದ ಜೊತೆಗೆ ಉದ್ಯೋಗಿ ಕೂಡ ಆಗಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರು ಬಜ್ಜೋಡಿ ತಾರೆತೋಟದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೂರು ಪಲ್ಟಿಯಾಗಿ ಬಿದ್ದಿದೆ. ಮೊಹಮ್ಮದ್ ಅಮಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಉಸಿರುಚಲ್ಲಿದ್ದಾರೆ. ನಿನ್ನೆ ತಡರತರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular