HomeLatest NewsBIG NEWS : 'ರಾಜ್ಯ ಸರ್ಕಾರಿ ನೌಕರ'ರಿಗೆ ಗುಡ್ ನ್ಯೂಸ್ : 'ವರ್ಗಾವಣೆ ಅವಧಿ' ವಿಸ್ತರಿಸಿ...

BIG NEWS : ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್ : ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರದಿಂದ ಮಹತ್ವದ ಆದೇಶ |Govt Employee

ಬೆಂಗಳೂರು : ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್ ಎಂಬಂತೆ ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 12.05.2025 ರಿಂದ 14.06.2025 ರವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 12.05.2025ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 30.06.2025ರವರೆಗೆ ವಿಸ್ತರಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular