HomeLatest Newsಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್: ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ

ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್: ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ವಾಡಿಕೆ ದಿನಾಂಕಕ್ಕಿಂತ ಮೊದಲೇ ಮುಂಗಾರು ಆರಂಭವಾಗಿರುವುದರಿಂದ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಮನೆಗಳು, ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಏಪ್ರಿಲ್ 1ರಿಂದಲೇ ಅನ್ವಯವಾಗುವಂತೆ ಪರಿಹಾರ ನೀಡಲು ಸರ್ಕಾರ ಆದೇಶಿಸಿದೆ.

ಈ ಮೊದಲು ನೈರುತ್ಯ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ 30ರವರೆಗೆ ಮಳೆ ಹಾನಿ ಪ್ರಕರಣಗಳಿಗೆ ಷರತ್ತುಗಳನ್ನು ಪಾಲಿಸಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ಒದಗಿಸಲು ಸರ್ಕಾರ ಆದೇಶಿಸಿತ್ತು.

ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ವಾಡಿಕೆಯ 166 ಮಿ.ಮೀ. ಮಳೆ ಬದಲಿಗೆ 944 ಮಿ.ಮೀ. ಮಳೆಯಾಗಿದೆ. ಮುಂಗಾರು ಮೇ ತಿಂಗಳಲ್ಲೇ ಪ್ರಾರಂಭವಾಗಿದೆ. ಇದರಿಂದ ನೆರೆ, ಭೂಕುಸಿತ, ಪ್ರವಾಹ ಮತ್ತಿತರ ಪ್ರಾಕೃತಿಕ ವಿಕೋಪದಿಂದ ಜೀವ ಹಾನಿ, ಜಾನುವಾರುಗಳ ಪ್ರಾಣಹಾನಿ, ಮನೆ ಹಾನಿ ಉಂಟಾಗಿದೆ. ಈ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಲು ಮೇ 1ರಿಂದಲೇ ಉಂಟಾದ ಮಳೆ ಹಾನಿ ಪರಿಗಣಿಸಿ ಹೆಚ್ಚುವರಿ ಪರಿಹಾರ ಪಾವತಿಸಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular